ಕೊತ್ತಂಬರಿ ಸೊಪ್ಪನ್ನು ಅಡುಗೆಯಲ್ಲಿ ಸ್ವಾದ ಮತ್ತು ಕಂಪು ಹೆಚ್ಚಿಸಲು ಕೊನೆಯದಾಗಿ ಬಳಸಲಾಗುತ್ತದೆ. ಸಾಲಾಡ್, ಚಟ್ನಿ ಮೊದಲಾದವುಗಳಲ್ಲಿ ಕೊತ್ತಂಬರಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ ಇದರ ಪ್ರಯೋಜನ ಕೇವಲ ಅಡುಗೆಯಲ್ಲಿ ಮಾತ್ರವಲ್ಲ, ದೇಹದ ಆರೈಕೆಗೂ ವ್ಯಾಪಿಸಿದೆ. ಎಷ್ಟೋ ತೊಂದರೆಗಳ ಚಿಕಿತ್ಸೆಗೆ ಸಾವಿರಾರು ರೂಪಾಯಿ ವೆಚ್ಚವಾಗುತ್ತಿದ್ದುದು ಕೊತ್ತಂಬರಿಯಿಂದ ಅಲ್ಪವೆಚ್ಚದಲ್ಲಿ ಗುಣವಾಗಿದೆ. ಇದರಲ್ಲಿರುವ ವಿವಿಧ ಪೋಷಕಾಂಶಗಳು, ವಿಶೇಷವಾಗಿ ಪೊಟ್ಯಾಶಿಯಂ ಹಲವು ರೀತಿಯಲ್ಲಿ ದೇಹಕ್ಕೆ ಅನುಕೂಲಕರವಾಗಿದೆ. ಉಳುಕು, ಸುಟ್ಟಗಾಯ ಮೊದಲಾದವುಗಳಿಗೆ ದೇಹದ ಹೊರಗಿನಿಂದ ಆರೈಕೆ ನೀಡಿದರೆ ಆಹಾರದ ಮೂಲಕ ಸೇವಿಸುವುದರಿಂದ ಜೀರ್ಣಕ್ರಿಯೆ ಉತ್ತಮಗೊಳಿಸುವ […]
↧