ಜಕರ್ತಾ: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಸುಮತ್ರಾ ನೈಋತ್ಯ ಭಾಗದ ತೀರದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ಪಡಾಂಗ್‍ನ 808 ಕಿ.ಮೀ ದೂರದಲ್ಲಿರುವ ಸಮುದ್ರದ 10 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ. ಇಂಡೋನೇಷ್ಯಾ ರಾಷ್ಟ್ರೀಯ ಹವಾಮಾನ ಸಂಸ್ಥೆ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಎಚ್ಚರಿಕೆ ನೀಡಿದೆ. 2004ರಲ್ಲಿ ಸುಮತ್ರಾದ ಪಶ್ಚಿಮ ಭಾಗದಲ್ಲಿ ಸಂಭವಿಸಿದ ಭೂಕಂಪದಿಂದ ಎದ್ದ ಸುನಾಮಿಯಿಂದಾಗಿ ಭಾರತ, ಇಂಡೋನೇಷ್ಯಾ, ಶ್ರೀಲಂಕಾ,ಥಾಯ್ಲೆಂಡ್ ದೇಶಗಳ ಒಟ್ಟು 2 ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದರು.
↧