ಅಡೆನ್ (ಎಎಫ್‌ಪಿ): ಯೆಮನ್‌ನ ಅಡೆನ್ ನಗರದ ವೃದ್ಧಾಶ್ರಮದಲ್ಲಿ ಶುಕ್ರವಾರ ನಡೆದ ಭಯೋತ್ಪಾದನಾ ದಾಳಿಯಲ್ಲಿ ಭಾರತದ ನಾಲ್ವರು ಕ್ರೈಸ್ತ ಸನ್ಯಾಸಿನಿಯರು ಸೇರಿದಂತೆ 16 ಮಂದಿ ಮೃತಪಟ್ಟಿದ್ದಾರೆ. ನಾಲ್ಕು ಮಂದಿ ಬಂದೂಕುಧಾರಿಗಳು ಮನಬಂದಂತೆ ದಾಳಿ ನಡೆಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಐಎಸ್ ಉಗ್ರರು ಈ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
↧