ಇಸ್ಲಾಮಾಬಾದ್: ಮುಂಬೈ ದಾಳಿ ಪ್ರಕರಣದ ಸಂಚುಕೋರ, ಲಷ್ಕರ್–ಎ ತಯಬಾ (ಎಲ್‌ಇಟಿ) ಮುಖ್ಯಸ್ಥ ಝಕಿವುರ್ ರೆಹಮಾನ್ ಲಖ್ವಿ ರಾವಲ್ಪಿಂಡಿಯ ಕಾರಾಗೃಹದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾನೆ. ಈತನನ್ನು ಇರಿಸಿರುವ ಕೊಠಡಿಯಲ್ಲಿ ಅಂತರ್ಜಾಲ, ಮೊಬೈಲ್ ಸೌಲಭ್ಯ ಒದಗಿಸಲಾಗಿದೆ. ಅಲ್ಲದೆ ಅತಿಥಿಗಳನ್ನು ಭೇಟಿ ಮಾಡುವುದಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಅಲ್ಲಿನ ಸರ್ಕಾರದ ಹೇಳಿಕೆಗೆ ತದ್ವಿರುದ್ಧವಾಗಿ ಉಗ್ರನಿಗೆ ಸೌಲಭ್ಯ ಒದಗಿಸಲಾಗಿದೆ. ರಾವಲ್ಪಿಂಡಿಯ ಅಡಿಯಾಲಾ ಕಾರಾಗೃಹದಲ್ಲಿ ಭಾರಿ ಭದ್ರತೆಯಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾನೆ ಎಂದು ಬಿಬಿಸಿ ಉರ್ದು […]
↧