ಬೀಜಿಂಗ್: ಕಲ್ಲಿದ್ದಲು ಗಣಿಯಲ್ಲಿ ಅನಿಲ ಸೋರಿಕೆಯಿಂದ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿ 12 ಮೃತಪಟ್ಟ ಘಟನೆ ಚೀನಾದ ಜಿಲಿನ್ ಪ್ರಾಂತ್ಯದಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಕ್ಷಣಾಕಾರ್ಯ ಅಂತ್ಯಗೊಂಡಿದೆ ಎಂದು ಸೋಮವಾರ ಬೆಳಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಇನ್ನು ಕೆಲವು ಕಾರ್ವಿುಕರು ಗಾಯಗೊಂಡಿರುವುದಾಗಿ ತಿಳಿಸಿದ್ದಾರೆ. ಭಾನುವಾರ 11.30ರ ಸುಮಾರಿಗೆ ಬೈಶಾನ್ನ ಸಾಂಗ್ಶು ಗಣಿಯಲ್ಲಿ ಘಟನೆ ಸಂಭವಿಸಿದ್ದು, ಈ ಗಣಿ ಟಾಂಗುಹಾ ಮೈನಿಂಗ್ ಇಂಡಸ್ಟ್ರೀ ಕೋ. ಲಿಮಿಟೆಡ್ಗೆ ಸೇರಿದ್ದು ಎನ್ನಲಾಗಿದೆ. ಘಟನೆಗೆ ಕಾರಣ ಏನು […]
↧