ಇಸ್ಲಾಮಾಬಾದ್ (ಪಿಟಿಐ): ಮಾಜಿ ಸೇನಾಡಳಿತಗಾರ ಪರ್ವೇಜ್ ಮುಷರಫ್ ಅವರ ವಿದೇಶಿ ಪ್ರವಾಸದ ಮೇಲಿನ ನಿರ್ಬಂಧ ತೆರವುಗೊಳಿಸುವಂತೆ ಸರ್ಕಾರಕ್ಕೆ ಪಾಕಿಸ್ತಾನ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. ದೇಶದ್ರೋಹ ಸೇರಿದಂತೆ ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಮುಷರಫ್, ಸುಪ್ರೀಂ ಕೋರ್ಟ್ ಆದೇಶದಿಂದ ನಿರಾಳರಾಗಿದ್ದಾರೆ. ಮುಷರಫ್ ವಿದೇಶಿ ಪ್ರವಾಸ ಮಾಡಬಹುದು ಎಂದು ಸಿಂಧ್ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಅನ್ವರ್ ಜಹೀರ್ ಜಮಾಲಿ ಅವರ ನೇತೃತ್ವದ ಐವರು ಸದಸ್ಯರ […]
↧