ಪೆಶಾವರ (ಏಜೆನ್ಸೀಸ್): ಪಾಕಿಸ್ತಾನದ ಪೆಶಾವರದಲ್ಲಿ ಬುಧವಾರ ನಡೆದಿರುವ ಬಾಂಬ್ ಸ್ಫೋಟದಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. ಸರ್ಕಾರಿ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ನಲ್ಲಿ ಬಾಂಬ್ ಸ್ಫೋಟಿಸಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ‘ಬಸ್‌ನಲ್ಲಿ ಸುಮಾರು 50 ಮಂದಿ ಸರ್ಕಾರಿ ಸಿಬ್ಬಂದಿ ಇದ್ದರು. ಘಟನೆಯ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ’ ಎಂದು ಪೆಶಾವರದ ಹಿರಿಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಕಾಶಿಫ್ ತಿಳಿಸಿದ್ದಾರೆ. ಈವರೆಗೆ ಯಾವ ಭಯೋತ್ಪಾದಕ ಸಂಘಟನೆಯೂ ಬಾಂಬ್ ದಾಳಿಯ ಹೊಣೆ ಹೊತ್ತಿಲ್ಲ.
↧