ಲಾಹೋರ್: ದಕ್ಷಿಣ ಪಾಕಿಸ್ತಾನದ ಲಾಹೋರ್ ನಲ್ಲಿ ಸಂಭವಿಸಿದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 70 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ಲಾಹೋರ್ ನ ಪ್ರಸಿದ್ಧ ತಾಣವೆಂದೇ ಹೇಳಲಾಗುವ ಗಲ್ಶಾನ್-ಇ-ಇಕ್ಬಾಲ್ ಪಾರ್ಕ್ ನಲ್ಲಿ ಪ್ರತೀ ನಿತ್ಯ ಹಲವು ಪ್ರವಾಸಿಗರು ಆಗಮಿಸುತ್ತಿರುತ್ತಾರೆ. ಜನನಿ ಬಿಡ ಪ್ರದೇಶಗಳನ್ನೇ ತಮ್ಮ ಗುರಿಯಾಗಿಸಿಕೊಳ್ಳುತ್ತಿರುವ ಉಗ್ರ ಸಂಘಟನೆಗಳು ನಿನ್ನೆ ಸಂಜೆ 6.30ರ ಸುಮಾರಿಗೆ ಆತ್ಮಾಹುತಿ ಬಾಂಬ್ ಸ್ಫೋಟಿಸಿದೆ. ಇದರ ಪರಿಣಾಮ ಸ್ಥಳದಲ್ಲಿದ್ದ 70 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 300 ಕ್ಕೂ […]
↧