ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ರಾಕೇಶ್ (39) ಸಿದ್ದರಾಮಯ್ಯ ಶನಿವಾರ ಬೆಲ್ಜಿಯಂನ ಬ್ರುಸೆಲ್ಸ್ ಸಿಟಿಯ ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ಅಕಾಲಿಕವಾಗಿ ವಿಧಿವಶರಾಗಿರುವುದಾಗಿ ತಿಳಿದುಬಂದಿದೆ. ಬೆಲ್ಜಿಯಂ ಪ್ರವಾಸದಲ್ಲಿದ್ದ ರಾಕೇಶ್ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಅವರನ್ನು ಬ್ರಸೆಲ್ಸ್ ನ ಯೂನಿರ್ವಸಿಟಿ ಆಸ್ಪತ್ರೆಯಲ್ಲಿ ಕಳೆದ ವಾರ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ರಾಕೇಶ್ ಗೆ ಚಿಕಿತ್ಸೆ ನೀಡಲಾಗುತ್ತಿತ್ತು, ಜೀವನ್ಮರಣದ ಹೋರಾಟ ನಡೆಸುತ್ತಿದ್ದ ರಾಕೇಶ್ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆಂದು ಮೂಲಗಳು ತಿಳಿಸಿವೆ. ಪುತ್ರನ ಅನಾರೋಗ್ಯದ […]
↧