ಕಠ್ಮಂಡು: ನೇಪಾಳದಿಂದ ಭಾರತಕ್ಕೆ ಪ್ರಯಾಣಿಸುವ ಪ್ರಯಾಣಿಕರು ಕಡ್ಡಾಯವಾಗಿ ಮಾನ್ಯತೆ ಪಡೆದ ಗುರುತು ಚೀಟಿ ಹೊಂದಿರಬೇಕು ಎಂದು ಭಾರತೀಯ ಭದ್ರತಾ ಸಂಸ್ಥೆಗಳು ನಿಯಮ ತಂದಿವೆ ಎಂದು ಇಲ್ಲಿನ ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ನೇಪಾಳದ ರಾಷ್ಟ್ರೀಯ ಸುದ್ದಿ ಸಂಸ್ಥೆಯಾದ ರಾಷ್ಟ್ರೀಯ ಸಮಾಚಾರ್ ಸಮಿತಿ, ಭಾರತದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಪಶ್ಚಿಮ ನೇಪಾಳ ಗಡಿಯಲ್ಲಿ ಬಿಗಿ ಭದ್ರತೆ ಕಲ್ಪಿಸಲು ಭಾರತೀಯ ಭದ್ರತಾ ಸಂಸ್ಥೆಗಳು ಮುಂದಾಗಿವೆ ಎಂದು ವರದಿ ಮಾಡಿದೆ. ಸಾಮಾನ್ಯವಾಗಿ ನೇಪಾಳ ನಾಗರಿಕರು ಭಾರತಕ್ಕೆ ಭೇಟಿ ನೀಡಬೇಕೆಂದರೆ ವೀಸಾದ ಅವಶ್ಯಕತೆಯಿರುವುದಿಲ್ಲ. […]
↧