ರೆನ್ನೆಸ್ (ಎಎಫ್‌ಪಿ): ಉತ್ತರ ಫ್ರಾನ್ಸ್‌ನ ರುಯೇನ್ ನಗರದ ಬಾರ್‌ವೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ 13 ಮಂದಿ ಮೃತಪಟ್ಟಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಬಾರ್‌ನ ತಳಮಹಡಿಯಲ್ಲಿ ಆಯೋಜಿಸಿದ್ದ ಹುಟ್ಟುಹಬ್ಬದ ಸಮಾರಂಭದ ವೇಳೆ ಬೆಂಕಿ ಹೊತ್ತಿಕೊಂಡಿದೆ. 50 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ಘಟನೆ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ ಎಂದು ಫ್ರಾನ್ಸ್‌ನ ಆಂತರಿಕ ಸಚಿವ ಬರ್ನಾರ್ಡ್ ಕೆಜೆನುವೆ ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಹಚ್ಚಿದ್ದ ಮೇಣದ ಬತ್ತಿಯಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಘಟನೆಯಲ್ಲಿ ಗಾಯಗೊಂಡಿರುವ ವ್ಯಕ್ತಿಯೊಬ್ಬರ ಸ್ಥಿತಿ […]
↧