ನಾಗಾಲೋಟದ ಜೀವನದಲ್ಲಿ ನಾವೆಲ್ಲಾ ಒಂದಲ್ಲಾ ಒಂದು ರೀತಿಯಲ್ಲಿ ಒತ್ತಡದಿಂದಲೇ ಜೀವನ ನಡೆಸುತ್ತಿದ್ದೇವೆ. ಈ ಒತ್ತಡದ ಬದುಕು ನಮ್ಮ ಆರೋಗ್ಯ ಮತ್ತು ಸೌಂದರ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಕೆಲಸದ ಒತ್ತಡದಿಂದಾಗಿ ರಾತ್ರಿ ವೇಳೆ ಸರಿಯಾಗಿ ನಿದ್ರೆ ಮಾಡದಿದ್ದರೆ ಮಾನಸಿಕ ಒತ್ತಡಗಳನ್ನು ಅನುಭವಿಸುತ್ತಿದ್ದರೆ, ನಮ್ಮ ಕಣ್ಣುಗಳೇ ಇದನ್ನು ತಿಳಿಸಿಬಿಡುತ್ತವೆ. ಕಣ್ಣುಗಳಲ್ಲಿ ಹೊಳಪು ಮಾಯವಾಗಿ ಕಣ್ಣಿನ ಸುತ್ತ ಕಪ್ಪು ಕಲೆ ಕಾಣಿಸಿಕೊಳ್ಳುತ್ತದೆ. ಇದರಿಂದ ಮುಖ ಕಳೆಗುಂದಿದಂತಾಗಿ, ನಿಸ್ತೇಜಕವಾಗಿ ಕಾಣುತ್ತದೆ. ಇಂತಹ ಸಮಸ್ಯೆಗಳನ್ನು ಸ್ವಾಭಾವಿಕವಾಗಿ ಹೋಗಲಾಡಿಸಲು ಚೆನ್ನಾಗಿ ನಿದ್ರೆ ಮಾಡುವುದೊಂದೇ ಮಾರ್ಗ. […]
↧