ವಾಷಿಂಗ್ಟನ್: ವಿಶ್ವಸಂಸ್ಥೆಯ ನ್ಯಾಯಮಂಡಳಿ ದಕ್ಷಿಣ ಚೀನಾ ಸಮುದ್ರ ವಿಚಾರವಾಗಿ ಚೀನಾ ವಿರುದ್ಧ ತೀರ್ಪು ನೀಡಿರುವುದು ಚೀನಾವನ್ನು ಸಂಕಷ್ಟಕ್ಕೀಡುಮಾಡಿದ್ದು, ಇದೀಗ ಚೀನಾ ವಿವಾದಿತ ದಕ್ಷಿಣ ಚೀನಾ ಸಮುದ್ರದ ಮೇಲಿನ ತನ್ನ ಸ್ವಯಂಘೋಷಿತ ಪಾರಮ್ಯವನ್ನು ಇನ್ನಷ್ಟು ಬಿಗಿ ಗೊಳಿಸುವ ನಿಟ್ಟಿನಲ್ಲಿ ಸ್ಪಾರ್ಟ್‌ಲೀ ದ್ವೀಪಗಳಲ್ಲಿನ ತನ್ನ ನೆಲೆಗಳಲ್ಲಿ ವಿಮಾನ ತಂಗುದಾಣಗಳನ್ನು ನಿರ್ಮಿಸುತ್ತಿದೆ. ಈ ಮೂಲಕ ಬಹುತೇಕ ಯುದ್ಧಕ್ಕೆ ಸಿದ್ಧತೆ ನಡೆಸುತ್ತಿದೆ ಎಂದು ವಾಷಿಂಗ್ಟನ್‌ನಲ್ಲಿರುವ ಅಂತಾರಾಷ್ಟ್ರೀಯ ವ್ಯೂಹಗಾರಿಕೆ ಅಧ್ಯಯನ ಕೇಂದ್ರ (ಸಿಎಸ್‌ಐಎಸ್) ಎಂಬ ಚಿಂತನ ಚಾವಡಿ ಹೇಳಿರುವುದಾಗಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. […]
↧