ಊಟ ಬಲ್ಲವನಿಗೆ ರೋಗವಿಲ್ಲ. ಮಾತು ಬಲ್ಲವನಿಗೆ ಜಗಳವಿಲ್ಲ ಎಂಬ ಗಾದೆ ಮಾತಿದೆ. ಯಾವ ಆಹಾರಗಳನ್ನು ಸೇವಿಸಬೇಕು ಎಂಬ ಜ್ಞಾನವನ್ನು ರೂಢಿಸಿಕೊಂಡರೆ ಆರೋಗ್ಯಕರವಾಗಿ ಜೀವನ ನಡೆಸಬಹುದು. ಅದರಲ್ಲೂ ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಹೆಚ್ಚು. ಆರೋಗ್ಯ ಹಾಗೂ ಸೌಂದರ್ಯದ ಬಗ್ಗೆ ಹೆಚ್ಚಿನ ಗಮನ ನೀಡುವ ಮಹಿಳೆಯರು ಊಟದಲ್ಲಿ ಸರಿಯಾದ ಆಹಾರಗಳನ್ನು ತೆಗೆದುಕೊಳ್ಳುವ ಮೂಲಕ ನಳನಳಿಸುವಂತೆ ಇರಬಹುದು. ಸರಿಯಾದ ಪ್ರಮಾಣದಲ್ಲಿ ಕ್ಯಾಲೋರಿ ಅಂಶ ಹಾಗೂ ಪೋಷಕಾಂಶಗಳನ್ನು ಸಮ ಪ್ರಮಾಣದಲ್ಲಿ ತೆಗೆದುಕೊಳ್ಳುವುದರಿಂದ ರೋಗ ಹಾಗೂ ವಯಸ್ಸಾಗುವ ಸಮಸ್ಯೆಗಳನ್ನು ದೂರ ಮಾಡಬಹುದು. […]
↧