ನವದೆಹಲಿ: ಕಾಶ್ಮೀರ ಸಮಸ್ಯೆಯನ್ನು ಜಾಗತಿಕ ಮಟ್ಟದಲ್ಲಿ ಹೈಲೈಟ್ ಮಾಡುವ ಸಲುವಾಗಿ ಪಾಕಿಸ್ತಾನ ಸರಕಾರ 22 ಸಂಸತ್ ಸದಸ್ಯರ ನಿಯೋಗವೊಂದನ್ನು ಜಗತ್ತಿನ ವಿವಿಧ ಪ್ರದೇಶಗಳಿಗೆ ಕಳುಹಿಸಲು ತೀರ್ಮಾನಿಸಿದೆ. ಕಾಶ್ಮೀರದಲ್ಲಿ ಭಾರತ ಸರಕಾರ ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದ್ದು ಅದಕ್ಕೆ ಕಡಿವಾಣ ಹಾಕಲು ಪಾಕಿಸ್ತಾನ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಶನಿವಾರ ಪಾಕ್ ಮಾಧ್ಯಮಗಳು ವರದಿ ಮಾಡಿವೆ. ಕಾಶ್ಮೀರದ ಪರವಾಗಿ ದನಿಯೆತ್ತಲು 22 ಸದಸ್ಯರನ್ನು ಜಗತ್ತಿನ ವಿವಿಧ ಭಾಗಗಳಿಗೆ ಕಳುಹಿಸಲಾಗುವುದು ಎಂದು ಪಾಕಿಸ್ತಾನದ ಪ್ರಧಾನಿ ನವಾಜ್ ಶರೀಫ್ ಹೇಳಿದ್ದಾರೆ ಎಂದು […]
↧