ಹನಾಯ್(ವಿಯೆಟ್ನಾಂ) (ಪಿಟಿಐ): ಮಾಹಿತಿ ತಂತ್ರಜ್ಞಾನ, ಬಾಹ್ಯಾಕಾಶ, ಸೈಬರ್ ಭದ್ರತೆ ಹಾಗೂ ಆರೋಗ್ಯ ಸೇರಿದಂತೆ 12 ಮಹತ್ವದ ದ್ವಿಪಕ್ಷೀಯ ಒಪ್ಪಂದಗಳಿಗೆ ಭಾರತ ಮತ್ತು ವಿಯೆಟ್ನಾಂ ಶನಿವಾರ ಸಹಿಹಾಕಿವೆ. ಸೆ. 4ರಂದು ಚೀನಾದಲ್ಲಿ ನಡೆಯಲ್ಲಿರುವ ಜಿ–20 ಶೃಂಗಸಭೆಯಲ್ಲಿ ಭಾಗವಹಿಸುವ ಸಲುವಾಗಿ ಪ್ರಯಾಣ ಬೆಳೆಸಿರುವ ಪ್ರಧಾನಿ ಮೋದಿ ಅವರು ಶೃಂಗಸಭೆಗೂ ಮುನ್ನ ವಿಯೆಟ್ನಾಂ ಪ್ರವಾಸ ಕೈಗೊಂಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಯೆಟ್ನಾಂ ಪ್ರಧಾನಿ ಗುಯೆನ್ ಕ್ಸುವಾನ್ ಅವರು ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದರು. ವಿಯೆಟ್ನಾಂ […]
↧