ನವದೆಹಲಿ: ಪಾಕಿಸ್ತಾನದ ಕೆಲ ರಾಜಕೀಯ ಪಕ್ಷಗಳು ಸ್ವಹಿತಾಸಕ್ತಿಗಾಗಿ ಭಯೋತ್ಪಾದಕರನ್ನು ಬೆಂಬಲಿಸುತ್ತಿವೆ ಎಂದು ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಅನ್ವರ್ ಝಹೀರ್ ಜಮಾಲಿ ಗಂಭೀರ ಆರೋಪ ಮಾಡಿದ್ದಾರೆ. ನ್ಯಾಯಮೂರ್ತಿ ಜಮಾಲಿ ಪಾಕಿಸ್ತಾನದ ಖಾಸಗಿ ಟಿವಿ ಚಾನೆಲ್ನೊಂದಿಗೆ ಮಾತನಾಡಿ, ಕೆಲ ರಾಜಕೀಯ ಪಕ್ಷಗಳು ಸ್ವಹಿತಾಸಕ್ತಿಗಾಗಿ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವುದು ಅಸಮಾಧಾನ ತಂದಿದೆ ಎಂದು ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ ಅಂತರಿಕ ಸಮಸ್ಯೆಗಳಿಂದಾಗಿ ಭಯೋತ್ಪಾದನೆ ಹೆಚ್ಚಾಗುತ್ತಿದೆ. ಉಗ್ರರು ವಕೀಲರು ಮತ್ತು ನ್ಯಾಯಮೂರ್ತಿಗಳಲ್ಲಿ ಭಯ ಹುಟ್ಟಿಸಲು ಕೋರ್ಟ್ಗಳ ಮೇಲೆ ಉಗ್ರರು ದಾಳಿ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದುವರಿದು […]
↧