ಇಸ್ಲಾಮಾಬಾದ್: ಸಾರ್ಕ್ ಸದಸ್ಯ ರಾಷ್ಟ್ರಗಳೊಂದಿಗಿನ ಸಂಬಂಧ ಹದಗೆಡುತ್ತಿರುವುದರಿಂದ ಹಾಗೂ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯಿಂದಾಗಿ ಕಂಗೆಟ್ಟಿರುವ ಪಾಕಿಸ್ತಾನ ಸರ್ಕಾರ ಇದೀಗ ಪಾಕಿಸ್ತಾನದಲ್ಲಿ ಪ್ರಸಾರವಾಗುತ್ತಿರುವ ಎಲ್ಲಾ ಭಾರತೀಯ ಟಿವಿ ಚಾನೆಲ್ ಗಳ ಮೇಲೆ ನಿಷೇಧ ಹೇರಲು ಮುಂದಾಗಿದೆ. ಪಾಕಿಸ್ತಾನದಲ್ಲಿ ಭಾರತದ ಯಾವುದೇ ಚಾನೆಲ್ ಗಳ ಪ್ರಸಾರ ಮಾಡದಂತೆ ಪಾಕಿಸ್ತಾನ ಎಲೆಕ್ಟ್ರಾನಿಕ್ ಮಾಧ್ಯಮ ನಿಯಂತ್ರಣ ಪ್ರಾಧಿಕಾರ (ಪಿಇಎಂಆರ್’ಎ) ನಿರ್ಧಾರವನ್ನು ಕೈಗೊಂಡಿದ್ದು, ಕೂಡಲೇ ಪಾಕಿಸ್ತಾನದಲ್ಲಿ ಪ್ರಸಾರವಾಗುತ್ತಿರುವ ಎಲ್ಲಾ ಭಾರತೀಯ ಟಿವಿ ಚಾನೆಲ್ ಗಳನ್ನು ಸ್ಥಗಿತಗೊಳಿಸುವಂತೆ ಡೀಲರ್ ಗಳಿಗೆ ಸೂಚನೆ ನೀಡಿದೆ […]
↧