ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸೀಮಿತ ದಾಳಿ ಮೂಲಕ ಉಗ್ರರ ಶಿಬಿರಗಳನ್ನು ಧ್ವಂಸಗೈದ ಭಾರತೀಯ ಸೇನೆಯ ಪರಾಕ್ರಮಕ್ಕೆ ರಷ್ಯಾ ಬೆಂಬಲ ಸೂಚಿಸಿದ್ದು, ಭಯೋತ್ಪಾದನೆ ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಆಗ್ರಹಿಸಿದೆ. ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ಶಿಬಿರದ ಮೇಲೆ ಉಗ್ರ ದಾಳಿ ನಡೆಸಿ 20 ಯೋಧರನ್ನು ಹತ್ಯೆಗೈದ ಉಗ್ರರು ಪಾಕಿಸ್ತಾನಿ ಉಗ್ರರೆ ಎಂದು ಬಹಿರಂಗವಾಗಿ ಪ್ರಪ್ರಥಮ ಬಾರಿಗೆ ಹೇಳಿದ ದೇಶ ರಷ್ಯಾ ಎಂದು ಭಾರತದಲ್ಲಿನ ರಷ್ಯಾ ರಾಯಭಾರಿ ಅಲೆಕ್ಸಾಂಡರ್ ಎಂ ಕದಾಕಿನ್ ಹೇಳಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ […]
↧