ಕಿಗಾಲಿ: ಇಂಗಾಲದ ಡೈಆಕ್ಸೈಡ್‌ಗಿಂತಲೂ ಜಾಗತಿಕ ತಾಪಮಾನ ಹೆಚ್ಚಳದಲ್ಲಿ ಸಾವಿರ ಪಟ್ಟು ಅಧಿಕ ಪ್ರಭಾವ ಬೀರುವ ಹೈಡ್ರೋಫ್ಲೂರೋಕಾರ್ಬನ್ (ಎಚ್‌ಎಫ್‌ಸಿ) ನಿಯಂತ್ರಿಸಲು ರುವಾಂಡಾದ ಕಿಗಾಲಿಯಲ್ಲಿ ಶನಿವಾರ ಅಧಿಕೃತ ಒಪ್ಪಂದಕ್ಕೆ ಬರಲಾಗಿದೆ. ಜಾಗತಿಕ ತಾಪಮಾನ ಹೆಚ್ಚಳಕ್ಕೆ ಕಾರಣವಾಗುವ ಪ್ರಭಾವಯುತ ಹಸಿರುಮನೆ ಅನಿಲ ಉತ್ಪಾದನೆ ನಿಯಂತ್ರಣ ಹಾಗೂ 2050ರ ವೇಳೆಗೆ 0.5 ಸೆಲ್ಸಿಯಸ್ ಉಷ್ಣಾಂಶ ಏರಿಕೆಯನ್ನು ನಿಯಂತ್ರಿಸುವ ಒಪ್ಪಂದಕ್ಕೆ 200 ರಾಷ್ಟ್ರಗಳು ಒಮ್ಮತ ಸೂಚಿಸಿವೆ. ಗೃಹ ಮತ್ತು ಕಾರುಗಳ ಹವಾನಿಯಂತ್ರಕಗಳಲ್ಲಿ ಶೈತ್ಯಕಾರಿಯಾಗಿ ಹೈಡ್ರೋಫ್ಲೂರೋಕಾರ್ಬನ್ (ಎಚ್‌ಎಫ್‌ಸಿ) ಅನಿಲ ಹೆಚ್ಚು ಬಳಕೆಯಾಗುತ್ತಿದೆ. ಜಾಗತಿಕ ತಾಪಮಾನ ಹೆಚ್ಚಳದಲ್ಲಿ […]
↧