ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಪ್ರಸಿದ್ಧ ಯಾತ್ರಾ ಸ್ಥಳದಲ್ಲಿ ಶನಿವಾರ ನಡೆದ ಬಾಂಬ್ ಸ್ಫೋಟದಲ್ಲಿ ಸತ್ತವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. 100ಕ್ಕೂ ಹೆಚ್ಚು ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವು ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಶುಕ್ರವಾರ ಹಿನ್ನೆಲೆಯಲ್ಲಿ ನೂರಾನಿ ಯಾತ್ರಾಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಿದ್ದರು. ಯಾತ್ರಿಗಳನ್ನು ಗುರಿಯಾಸಿಕೊಂಡಿದ್ದ ಉಗ್ರರು ಈ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿ ತಮ್ಮ ಕ್ರೂರ ವರ್ತನೆಯನ್ನು ಪ್ರದರ್ಶಿಸಿದ್ದಾರೆ. ಯಾತ್ರಿಗಳು ಸಾಂಪ್ರಾದಾಯಿಕ ನೃತ್ಯ ಮಾಡುವುದರಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಬಾಂಬ್ […]
↧