ಜಕಾರ್ತ: ಇಂಡೋನೇಷ್ಯಾದ ಅಕೇಹ್ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದಾಗಿ ಕನಿಷ್ಠ 25 ಮಂದಿ ಸಾವಿಗೀಡಾಗಿದ್ದು, ನೂರಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.5ರಷ್ಟು ದಾಖಲಾಗಿದ್ದು, ಭೂಕಂಪನದ ತೀವ್ರತೆಗೆ ಹಲವು ಕಟ್ಟಡಗಳು ನೆಲಕ್ಕುರುಳಿವೆ. ಇಂಡೋನೇಷ್ಯಾದ ಸುಮಾತ್ರಾ ದ್ವೀಪದಲ್ಲಿರುವ ಅಕೇಹ್ ಪ್ರಾಂತ್ಯದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಹಲವಾರು ಮನೆಗಳು ನೆಲಸಮಗೊಂಡಿವೆ. ಪರಿಣಾಮ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಅವಶೇಷಗಳಡಿಯಲ್ಲಿ ನೂರಾರು ಮಂದಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಸುಮಾತ್ರಾ ದ್ವೀಪದ ಪುಟ್ಟ […]
↧