ನವದೆಹಲಿ: ಜರ್ಮನಿಯ ಫ್ರಾಂಕ್ ಫರ್ಟ್ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಮೂಲದ ಮಹಿಳೆಯನ್ನು ಅಪಮಾನಗೊಳಿಸಲಾಗಿದ್ದು, ಮಹಿಳೆಯನ್ನು ವಿವಸ್ತ್ರಗೊಳಿಸಿ ಶೋಧ ನಡೆಸಲು ಅಲ್ಲಿನ ಅಧಿಕಾರಿಗಳು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನಿಂದ ಐಸ್ ಲ್ಯಾಂಡ್ ಗೆ ತೆರಳುತ್ತಿದ್ದ 30 ವರ್ಷದ ಶೃತಿ ಬಸಪ್ಪ ಎಂಬುವವರನ್ನು ಫ್ರಾಂಕ್ ಫರ್ಟ್ ವಿಮಾನ ನಿಲ್ದಾಣ ಸಿಬ್ಬಂದಿ ಶೋಧ ಕಾರ್ಯವೇಳೆ ಅಸಭ್ಯವಾಗಿ ನಡೆಸಿಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಸಂತ್ರಸ್ಥ ಮಹಿಳೆ ಶೃತಿ ಬಸಪ್ಪ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದು, ಫ್ರಾಂಕ್ ಫರ್ಟ್ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ […]
↧