ಸಿಡ್ನಿ, ಏ. ೧- ಆಸ್ಟ್ರೇಲಿಯ ಕರಾವಳಿಯುದ್ದಕ್ಕೂ ಬೀಸಿದ ಭೀಕರ ಚಂಡಮಾರುತ ಭಾರಿ ಅನಾಹುತವನ್ನು ಸೃಷ್ಟಿಸಿದೆ. ಭಾರಿ ಮಳೆ ಚಂಡಮಾರುತದಿಂದ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹದ ಹಾವಳಿಗೆ ಇಬ್ಬರು ಮೃತಪಟ್ಟಿದ್ದು ಸಾವಿರಾರು ಮಂದಿ ಅತಂತ್ರರಾಗಿದ್ದಾರೆ. ಆಸ್ಟ್ರೇಲಿಯಾದ ಪೂರ್ವ ಕರಾವಳಿಯಲ್ಲಿ 1000 ಕಿ.ಮೀ. ವ್ಯಾಪ್ತಿಯಲ್ಲಿ ಚಂಡಮಾರುತದ ಪ್ರಭಾವ ಭೀಕರವಾಗಿದೆ. ಸಾವಿರಾರು ಮನೆಗಳು ನೀರಿನಲ್ಲಿ ಮುಳುಗಿ ಜನಜೀವನ ಭಯದಿಂದ ಮನೆಗಳ ಮಾಳಿಗೆ ಮೇಲೆ, ಎತ್ತರದ ಪ್ರದೇಶಗಳಲ್ಲಿ ರಕ್ಷಣೆ ಪಡೆಯುತ್ತಿದ್ದಾರೆ. ಕರಾವಳಿ ಭಾಗದ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಜನಜೀವನ, ಸಂಚಾರ ಅಸ್ತವ್ಯಸ್ತಗೊಂಡಿದೆ. […]
↧