ಇಸ್ಲಾಮಾಬಾದ್: ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರು ಪಾಕಿಸ್ತಾನ ಸೇನಾ ಕೋರ್ಟ್ ತಮಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ 60 ದಿನದೊಳಗೆ ಸೇನಾ ಮುಖ್ಯಸ್ಥರಿಗೆ ಮೇಲ್ಮನವಿ ಸಲ್ಲಿಸಬಹುದು ಎಂದು ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರು ಮಂಗಳವಾರ ಹೇಳಿದ್ದಾರೆ. ಜಾಧವ್ ಗಲ್ಲು ಶಿಕ್ಷೆಯನ್ನು ಭಾರತ ತೀವ್ರವಾಗಿ ಖಂಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಪಾಕ್ ರಕ್ಷಣಾ ಸಚಿವರು, ತಮ್ಮ ಸೇನೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ ಗೂಢಾಚಾರ ಆರೋಪ ಎದುರಿಸುತ್ತಿದ್ದ ಕುಲಭೂಷಣ್ ಯಾದವ್ ಅವರನ್ನು ಮೂರು ತಿಂಗಳ […]
↧