ನವದೆಹಲಿ: ಭಾರತದ ನಿವೃತ್ತ ಸೇನಾಧಿಕಾರಿ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ವಿಧಿಸಿದ್ದ ಗಲ್ಲು ಶಿಕ್ಷೆಗೆ ಅಂತರಾಷ್ಟ್ರೀಯ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಇದರಿಂದ ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ವಿಯೆನ್ನಾ ಒಪ್ಪಂದ ಪ್ರಕಾರ ಜಾಧವ್ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದಕ್ಕೆ ಪಾಕ್ ಯಾವುದೇ ರೀತಿಯ ಅವಕಾಶ ನೀಡಿಲ್ಲ ಅಂತಾರಾಷ್ಟ್ರೀಯ ನ್ಯಾಯಾಲಯದಿಂದ ಮುಂದಿನ ಸೂಚನೆ ಬರುವವರೆಗೆ ಜಾಧವ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಂತಿಲ್ಲ ಎಂದು ಕೋರ್ಟ್ ಸೂಚಿಸಿದೆ. ಕುಲಭೂಷಣ್ ಜಾಧವ್ ಮೇಲೆ ಪಾಕಿಸ್ತಾನ ಬೇಹುಗಾರಿಕೆ ಆರೋಪ ಹೊರಿಸಿ ಮಿಲಿಟರಿ ಕೋರ್ಟ್ನಲ್ಲಿ ಗಲ್ಲುಶಿಕ್ಷೆ ವಿಧಿಸಿತ್ತು. […]
↧
ಪಾಕಿಸ್ತಾನ ವಿಧಿಸಿದ್ದ ಗಲ್ಲು ಶಿಕ್ಷೆಗೆ ತಡೆಯಾಜ್ಞೆ ನೀಡಿದ ಅಂತರಾಷ್ಟ್ರೀಯ ನ್ಯಾಯಾಲಯ; ಪಾಕಿಸ್ತಾನಕ್ಕೆ ಭಾರೀ ಮುಖಭಂಗ
↧