ಇಸ್ಲಾಮಾಬಾದ್: ಭಾರತದೊಂದಿಗೆ ಉತ್ತಮ ದ್ವಿಪಕ್ಷೀಯ ಸಂಬಂಧ ಬೆಸೆಯಲು ಪಾಕಿಸ್ತಾನ ಹೆಣಗುತ್ತಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಭಾರತದ ಬಗ್ಗೆ ದ್ವೇಷದ ಭಾಷಣ ಮಾಡುತ್ತಿದ್ದಾರೆ. ಪಾಕಿಸ್ತಾನದ ಆಲ್ ಪಾಕಿಸ್ತಾನ್ ಮುಸ್ಲಿಂ ಲೀಗ್ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪರ್ವೇಜ್ ಮುಷರಫ್, 1999 ರಲ್ಲಿ ಭಾರತ-ಪಾಕ್ ನಡುವೆ ನಡೆದಿದ್ದ ಕಾರ್ಗಿಲ್ ಯುದ್ಧದ ಬಗ್ಗೆ ಮಾತನಾಡಿದ್ದಾರೆ. “ನಾವು ಮೂರು ತಿಂಗಳು ಯುದ್ಧ ನಡೆಸಿ ಭಾರತದ ಕುತ್ತಿಗೆ ಹಿಡಿದುಕೊಂಡಿದ್ದನ್ನು ಬಹುಶಃ ನವದೆಹಲಿಗೆ ಎಂದಿಗೂ ಮರೆಯಲು ಸಾಧ್ಯವಿಲ್ಲ”. ಎಂದು ವ್ಯಂಗ್ಯವಾಡಿದ್ದಾರೆ. […]
↧