ಲಾಹೋರ್: ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವಹಿವಾಟು ನಡೆಸಿದ ಆರೋಪ ಎದುರಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಹಾಗೂ ಅವರ ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳನ್ನು ಮತ್ತು ಆಸ್ತಿಯನ್ನು ಪಾಕಿಸ್ತಾನ ಭ್ರಷ್ಟಾಚಾರ ತಡೆ ಸಂಸ್ಥೆ ಶುಕ್ರವಾರ ಜಪ್ತಿ ಮಾಡಿದೆ. ಪನಾಮ ಪೇಪರ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ಜುಲೈ 28ರಂದು ಪಾಕ್ ಸುಪ್ರೀಂ ಕೋರ್ಟ್ 67 ವರ್ಷದ ನವಾಜ್ ಷರೀಫ್ ಅವರನ್ನು ಅನರ್ಹಗೊಳಿಸಿ, ಅವರ ವಿರುದ್ಧ ಭ್ರಷ್ಟಾಚಾರ ಕೇಸ್ ದಾಖಲಿಸುವಂತೆ ತೀರ್ಪು ನೀಡಿದ ದ ನಂತರ ಪ್ರಧಾನಿ […]
↧