ಬ್ಯಾಂಕಾಕ್: ಕ್ರಿಮಿನಲ್ ನಿರ್ಲಕ್ಷ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಥೈಲ್ಯಾಂಡ್ ಮಾಜಿ ಪ್ರಧಾನಿ ಯಿಂಗ್ಲಕ್ ಶಿನವಾತ್ರಗೆ ಥೈಲ್ಯಾಂಡ್ ಸುಪ್ರೀಂ ಕೋರ್ಟ್ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಸರ್ಕಾರದ ಅಕ್ಕಿ ಸಬ್ಸಿಡಿ ನೀತಿ ವಿಫಲವಾಗಿದೆ ಮತ್ತು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ 2014ರಲ್ಲಿ ಯಿಂಗ್ಲಕ್ ನೇತೃತ್ವದ ಚುನಾಯಿತ ಸರ್ಕಾರವನ್ನು ವಜಾಗೊಳಿಸಲಾಗಿತ್ತು. ಪ್ರತಿವಾದಿ ಆರೋಪಿ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದ್ದು, ಥೈಲ್ಯಾಂಡ್ ಪದಚ್ಯುತ ಪ್ರಧಾನಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ ಶಿಕ್ಷೆಯನ್ನು ಅಮಾನತುಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. […]
↧