ಕಾಬೂಲ್ : ಅಫ್ಘಾನಿಸ್ಥಾನದ ಆಗ್ನೇಯ ಭಾಗದಲ್ಲಿರುವ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಮಂಗಳವಾರ ತಾಲಿಬಾನ್ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು ಕನಿಷ್ಠ 32 ಮಂದಿ ಪೊಲೀಸರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಪಾಕ್ತಿಯಾ ಪ್ರಾಂತ್ಯದ ಗಾರ್ಡಿಯಾ ಪ್ರದೇಶದಲ್ಲಿರುವ ತರಬೇತಿ ಕೇಂದ್ರದ ಮೇಲೆ ಕಾರೊಂದರಲ್ಲಿ ಸ್ಫೋಟಕ ತುಂಬಿಕೊಂಡು ಬಂದ ಉಗ್ರರು ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲು ಕಾರನ್ನು ಸ್ಫೋಟಿಸಿದ್ದು, ಆ ಬಳಿಕ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. […]
↧