ಕಾಬೂಲ್: ಅಫ್ಘಾನಿಸ್ತಾನದ ಜಲಾಲಾಬಾದ್‌ನ ಪೂರ್ವ ಪಟ್ಟಣದಲ್ಲಿ ಸಿಖ್ಖರು ಮತ್ತು ಹಿಂದೂಗಳನ್ನು ಗುರಿಯಾಗಿಸಿ ಆತ್ಮಹತ್ಯಾ ಬಾಂಬರ್ ಒಬ್ಬ ನಡೆಸಿದ ದಾಳಿಗೆ ಕನಿಷ್ಠ 10 ಮಂದಿ ಬಲಿಯಾಗಿದ್ದಾರೆ. ಈ ದಾಳಿಯಲ್ಲಿ ಇನ್ನೂ ಐವರು ಗಾಯಗೊಂಡಿದ್ದಾರೆ ಎಂದು ನಂಗಹಾರ್ ಪ್ರಾಂತ್ಯದ ಪೊಲೀಸ್ ಮುಖ್ಯಸ್ಥ ಜನರಲ್ ಗುಲಾಂ ಸನಾಯೀ ಸ್ಟಾನೆಕ್‌ಝಾಯಿ ತಿಳಿಸಿದ್ದಾರೆ. ಗವರ್ನರ್ಸ್ ಕಂಪೌಂಡ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಗುಂಪನ್ನು ಗುರಿಯಾಗಿಸಿ ಆತ್ಮಹತ್ಯಾ ಬಾಂಬರ್ ದಾಳಿ ನಡೆಸಿದ್ದಾನೆ. ಬಲಿಯಾದ ಜನರ ಗುಂಪು ಅಧ್ಯಕ್ಷ ಅಶ್ರಫ್ ಘನಿ ಅವರನ್ನು ಭೇಟಿ ಮಾಡಲು ಹೋಗುತ್ತಿತ್ತು. ದಾಳಿಯ […]
↧