ಟೊಕಿಯೊ: ಜಪಾನ್ ಪ್ರವಾಹದ ಹೊಡೆತಕ್ಕೆ ಸಿಲುಕಿ ನಲುಗಿದೆ. ರಾಜಧಾನಿ ಟೊಕಿಯೋ ಸೇರಿದಂತೆ ಹಲವೆಡೆ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಭೂಕುಸಿತ ಹಾಗೂ ಪ್ರವಾಹದಿಂದಾಗಿ ಈವರೆಗೂ ಸುಮಾರು 195 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಿಂದಾಗಿ ಇಬ್ಬರು ನಾಪತ್ತೆಯಾಗಿರುವುದು ದೃಢಪಟ್ಟಿದ್ದು, 42 ಜನರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಜಪಾನಿನ ಮುಖ್ಯ ಸಂಪುಟ ಕಾರ್ಯದರ್ಶಿ ಯೊಶಿಹಿದೆ ಸುಗಾ ತಿಳಿಸಿದ್ದಾರೆ ಎಂದು ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಮಳೆಯಿಂದಾ ಹಾನಿಗೀಡಾಗಿರುವ ಒಕಾಯಾಮಾ ಪ್ರದೇಶಕ್ಕೆ ಜಪಾನ್ ಪ್ರಧಾನಿ ಶಿಂಜೊ ಅಬೆ ನಿನ್ನೆ ಭೇಟಿ […]
↧