ಲಾಹೋರ್: ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣದಲ್ಲಿ ಪಾಕಿಸ್ತಾನ ಸುಪ್ರೀಂಕೋರ್ಟ್ನಿಂದ 10 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಪಾಕ್ನ ಮಾಜಿ ಪ್ರಧಾನಿ ನವಾಜ್ ಷರೀಫ್ ಲಂಡನ್ನಿಂದ ಪಾಕಿಸ್ತಾನಕ್ಕೆ ಮರಳುತ್ತಿದ್ದಂತೆ ಏರ್ಪೋರ್ಟ್ನಲ್ಲೇ ಬಂಧನಕ್ಕೊಳಗಾಗುವ ಸಾಧ್ಯತೆಯಿದೆ. ನವಾಜ್ ಷರೀಫ್ ಮರಳುವ ಸಂದರ್ಭ ಅವರ ಬೆಂಬಲಿಗರು ರ್ಯಾಲಿ ನಡೆಸಿ ಅವರನ್ನು ಮೆರವಣಿಗೆಯಲ್ಲಿ ಕರೆದೊಯ್ಯುವ ಸಾಧ್ಯತೆಯಿರುವುದರಿಂದ ಮುಂಜಾಗೃತಾ ಕ್ರಮವಾಗಿ ಅಪಾರ ಸಂಖ್ಯೆಯ ಬೆಂಬಲಿಗರನ್ನು ಪಾಕ್ ಪೊಲೀಸರು ಬಂಧಿಸಿದ್ದಾರೆ. ಕಳೆದ ಜುಲೈನಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ನವಾಜ್ ಷರೀಫ್ ವಿರುದ್ಧ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. […]
↧