ಬೀಜಿಂಗ್ (ಪಿಟಿಐ): ನೈರುತ್ಯ ಚೀನಾದ ಸಿಯಾಚಿನ್ ಪ್ರಾಂತ್ಯದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಪ್ರಭಲ ಭೂಕಂಪದಲ್ಲಿ ನಾಲ್ವರು ಮೃತಪಟ್ಟು 80 ಸಾವಿರಕ್ಕೂ ಹೆಚ್ಚು ಮಂದಿ ತೊಂದರೆಗೆ ಸಿಲುಕಿದ್ದಾರೆ. 25 ಸಾವಿರಕ್ಕೂ ಹೆಚ್ಚು ಮನೆಗಳು ನೆಲಕ್ಕಚ್ಚಿವೆ. 6,200 ಮಂದಿಯನ್ನು ಸ್ಥಳಾಂತರಿಸಲಾಗಿದೆ. ರಿಕ್ಟರ್ ಮಾಪಕದಲ್ಲಿ 6.3ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ. ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದ್ದು, ಅವಶೇಷಗಳಡಿ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ 54 ಮಂದಿಯನ್ನು ರಕ್ಷಿಸಲಾಗಿದೆ. ಸಾವು ನೋವು ಇನ್ನೂ ಹೆಚ್ಚುವ ಸಾಧ್ಯತೆಗಳಿವೆ ಎಂದು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿ ಹೇಳಿದ್ದಾರೆ. […]
↧