ಜಕಾರ್ತ: ಇಂಡೊನೇಷ್ಯಾದ ಸುಲಾವೇಸಿ ದ್ವೀಪದ ಪಲು ನಗರದಲ್ಲಿ ಕಳೆದ ಶುಕ್ರವಾರ ಸಂಭವಿಸಿದ ಪ್ರಬಲ ಭೂಕಂಪನ ಮತ್ತು ಸುನಾಮಿಯ ಹೊಡೆತಕ್ಕೆ ಸಿಲುಕಿ ಸಾವನ್ನಪ್ಪಿರುವವರ ಸಂಖ್ಯೆ ಈ ವರೆಗೂ 832ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದ್ದು, ಭೂಕಂಪನ ಮತ್ತು ಸುನಾಮಿ ಅಲೆಗಳ ಬಳಿಕ ಅವಶೇಷಗಳಡಿಯಲ್ಲಿ ಸಿಕ್ಕ ಶವಗಳ ಸಂಖ್ಯೆ 832ಕ್ಕೆ ಏರಿಕೆಯಾಗಿದೆ. ಅಂತೆಯೇ ಸುನಾಮಿ ಬಳಿಕ ಪಲು ನಗರದಿಂದ ನೂರಾರು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಕುರಿತು ಅಧಿಕಾರಿಗಳು […]
↧