ಇಸ್ಲಾಮಾಬಾದ್: ಇತ್ತೀಚೆಗಷ್ಟೇ ಬಾಂಗ್ಲಾದೇಶ ಪ್ರವಾಸ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪಾಕಿಸ್ತಾನ ಸಂಸತ್ತು ಖಂಡನಾ ನಿರ್ಣಯ ಅಂಗೀಕಾರ ಮಾಡಿದೆ. ಪ್ರವಾಸದ ವೇಳೆ ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶವನ್ನು ಸ್ವತಂತ್ರ್ಯಗೊಳಿಸುವ ವಿಚಾರದಲ್ಲಿ ಭಾರತ ಸರ್ಕಾರ ತೋರಿದ ದಿಟ್ಟ ಹೆಜ್ಜೆ ಗುರಿತು ಮಾತನಾಡಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪಾಕಿಸ್ತಾನ ಜನಪ್ರತಿನಿಧಿಗಳು ಕಣ್ಣು ಕೆಂಪಗಾಗಿಸಿಕೊಂಡಿದ್ದು, ಭಾರತ ಪ್ರಧಾನಿ ವಿರುದ್ದ ಪಾಕ್ ಸಂಸತ್ ನಲ್ಲಿ ಖಂಡನಾ ನಿರ್ಣಯವನ್ನು ಅಂಗೀಕರಿಸಿದ್ದಾರೆ. […]
↧