ನವದೆಹಲಿ: ಕಾಶ್ಮೀರದ ಗಡಿಭಾಗದಲ್ಲಿ ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧದಂತಹ ಪರಿಸ್ಥಿತಿ ನಿರ್ಮಾಣಗೊಂಡಿರುವಂತೆಯೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶಾಂತಿ ಮಾತುಕತೆಗೆ ಆಸಕ್ತಿ ತೋರಿದ್ದಾರೆ. ಯುದ್ಧದಿಂದ ಏನೂ ಸಾಧಿಸಲಾಗುವುದಿಲ್ಲ. ಎರಡೂ ದೇಶಗಳು ಅರ್ಥ ಮಾಡಿಕೊಂಡು ಮಾತುಕತೆಗೆ ಮುಂದಾಗಬೇಕು ಎಂದು ಇಮ್ರಾನ್ ಖಾನ್ ಸಲಹೆ ನೀಡಿದ್ದಾರೆ. ಇವತ್ತು ಇಸ್ಲಾಮಾಬಾದ್ನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ, “ಮಾತುಕತೆಯ ಬಾಗಿಲು ತೆರೆದು ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಮಯ ಬಂದಿದೆ,” ಎಂದು ಕರೆ ನೀಡಿದ್ಧಾರೆ. “ಪುಲ್ವಾಮ ದಾಳಿಯ ತನಿಖೆಗೆ […]
↧