ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ನಾಳೆ ಬಿಡುಗಡೆ ಮಾಡುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಇಂದು ಜಂಟಿ ಸಂಸತ್ ಅಧಿವೇಶನದಲ್ಲಿ ಹೇಳಿದ್ದಾರೆ. ಎರಡು ದೇಶಗಳ ನಡುವೆ ಶಾಂತಿ ಸಂಕೇತವಾಗಿ ಅಭಿನಂದನ್ ಅವರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿರುವ ಅವರು, ಪರಿಸ್ಥಿತಿ ಕೈ ಮೀರದಂತೆ ಎರಡು ದೇಶಗಳು ನೋಡಿಕೊಳ್ಳಬೇಕಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾಗಿ ಪಾಕಿಸ್ತಾನದ ಡಾನ್ ಮಾಧ್ಯಮ ಸಂಸ್ಥೆ ವರದಿ ಮಾಡಿದೆ. ಬುಧವಾರ ಬೆಳಗ್ಗೆ ಪತನಗೊಂಡ ಭಾರತ ವಾಯುಪಡೆಯ ಮಿಗ್ […]
↧