ಇಸ್ಲಾಮಾಬಾದ್: ಪುಲ್ವಾಮ ಉಗ್ರದಾಳಿ ಬೆನ್ನಲ್ಲೇ ಭಾರತೀಯ ವಾಯುಪಡೆ ನಡೆಸಿದ ವಾಯುದಾಳಿ ಬಳಿಕ ಇದೀಗ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಸರ್ಕಾರ ಉಗ್ರ ಮಸೂದ್ ಅಜರ್ ಕುಟುಂಬಸ್ಥರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕ ಪಡೆದಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಉಗ್ರ ಮಸೂದ್ ಅಜರ್ ಸಹೋದರ ಮುಫ್ತಿ ಅಬ್ದುಲ್ ರೌಫ್, ಮಗ ಹಮಾಜ್ ಅಜರ್ ಸೇರಿದಂತೆ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಹಲವು ನಾಯಕರನ್ನು ಕೂಡ ಪಾಕಿಸ್ತಾನ ಪೊಲೀಸರು ಸರ್ಕಾರದ ನಿರ್ದೇಶನದ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. […]
↧