ವಾಷಿಂಗ್ಟನ್: ಪುಲ್ವಾಮ ದಾಳಿಕೋರರೂ ಸೇರಿದಂತೆ ಪಾಕಿಸ್ತಾನದಲ್ಲಿರುವ ಎಲ್ಲ ಉಗ್ರರ ವಿರುದ್ಧವೂ ಪಾಕಿಸ್ತಾನ ಸರ್ಕಾರ ಕಠಿಣ ಕ್ರಮ ಜರುಗಿಸುವ ಭರವಸೆ ನೀಡಿದೆ ಎಂದು ಅಮೆರಿಕ ಹೇಳಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಅವರು, ‘ಎಲ್ಲ ಉಗ್ರರ ವಿರುದ್ಧ ಕಠಿಣವಾಗಿ ನಡೆದುಕೊಳ್ಳಲಾಗುತ್ತದೆ ಹಾಗೂ ಭಾರತದೊಂದಿಗಿನ ಆತಂಕದ ವಾತಾವರಣ ಶಮನಗೊಳಿಸಲು ಸೂಕ್ತ ಕ್ರಮವಹಿಸಲಾಗುತ್ತದೆ ಎಂದು ಪಾಕಿಸ್ತಾನ ಭರವಸೆ ನೀಡಿದೆ ಎಂದು ಹೇಳಿದ್ದಾರೆ. ‘ಪಾಕಿಸ್ತಾನದ ವಿದೇಶಾಂಗ ಸಚಿವ ಖುರೇಶಿ ಅವರೊಂದಿಗೆ ಮಾತನಾಡಿದ್ದು, ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿರುವ […]
↧