ವಿಶ್ವಸಂಸ್ಥೆ: ಪಾಕಿಸ್ತಾನ ಮೂಲದ ಜೈಷ್-ಇ-ಮೊಹ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ನನ್ನು ಜಾಗತಿಕ ಉಗ್ರ ಎಂದು ಘೋಷಣೆ ಮಾಡುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಧಾರಕ್ಕೆ ಚೀನಾ ಮತ್ತೆ ಅಡ್ಡಗಾಲು ಹಾಕಿದೆ. ಪುಲ್ವಾಮಾ ದಾಳಿಯ ಹೊಣೆಯನ್ನು ಜೈಷ್ ಹೊತ್ತುಕೊಂಡಿತ್ತು. ಇದಾದ ನಂತರ ಫೆ.27ರಂದು ಭದ್ರತಾ ಸಮಿತಿಯ ಖಾಯಂ ಸದಸ್ಯ ರಾಷ್ಟ್ರಗಳಾದ ಫ್ರಾನ್ಸ್, ಇಂಗ್ಲೆಂಡ್, ಅಮೆರಿಕ ವಿಶ್ವಸಂಸ್ಥೆಯ ಬಳಿ ಮಸೂದ್ ಅಜರ್ನನ್ನು ಜಾಗತಿಕ ಉಗ್ರನ ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿದ್ದವು. ಆದರೆ ಈ ನಿರ್ಧಾರಕ್ಕೆ ಚೀನಾ ಬೆಂಬಲ ಸೂಚಿಸಿಲ್ಲ. ಈ […]
↧