ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡಿರುವ ಹಿನ್ನಲೆಯಲ್ಲಿ ಭಾರತದ ಸರ್ಕಾರದ ವಿರುದ್ಧ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಾಗ್ದಾಳಿ ನಡೆಸಿದ್ದಾರೆ. ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಇಮ್ರಾನ್ ಖಾನ್ ಕಾಶ್ಮೀರದಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳಿಗೆ ಆರೆಸೆಸ್ಸ್ ಕಾರಣ ಎಂದು ದೂರಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಕಾಶ್ಮೀರಿಗಳ ಮೇಲೆ ಕರ್ಪ್ಯೂ ವಿದಿಸುವಿಕೆ, ದಮನ ಮತ್ತು ನರಮೇಧವು ನಾಜಿ ಸಿದ್ಧಾಂತದಿಂದ ಪ್ರೇರಿತವಾದ ಆರ್ಎಸ್ಎಸ್ ಸಿದ್ಧಾಂತಕ್ಕೆ ನಿಖರವಾಗಿ ತೆರೆದುಕೊಳ್ಳುತ್ತಿದೆ, ಜನಾಂಗೀಯ ಶುದ್ಧೀಕರಣದ ಮೂಲಕ ಕಾಶ್ಮೀರದ ಚಿತ್ರಣವನ್ನೇ ಬದಲಾಯಿಸುವ ಪ್ರಯತ್ನ […]
↧