ಇಸ್ಲಾಮಾಬಾದ್: ಕಾಶ್ಮೀರ ವಿಷಯದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಪಾಕಿಸ್ತಾನ ಹೇಳಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಆರ್ಟಿಕಲ್ 370 ರದ್ದತಿ ಹಿನ್ನೆಲೆಯಲ್ಲಿ ಪಾಕಿಸ್ತಾನ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿರುವುದಾಗಿ ವಿದೆಶಾಂಗ ಸಚಿವ ಶಾ ಮೆಹ್ಮೂದ್ ಖುರೇಷಿ ಹೇಳಿದ್ದಾರೆ. ಆ.06 ರಂದು ಪಾಕಿಸ್ತಾನದ ಸಂಸತ್ ನಲ್ಲಿ ಮಾತನಾಡಿದ್ದ ಇಮ್ರಾನ್ ಖಾನ್ ಕಾಶ್ಮೀರದ ವಿಷಯವನ್ನು ವಿಶ್ವಸಂಸ್ಥೆ, ಅಂತಾರಾಷ್ಟ್ರೀಯ ನ್ಯಾಯಾಲಯ ಸೇರಿದಂತೆ ಎಲ್ಲಾ ವೇದಿಕೆಗಳಲ್ಲೂ ಪ್ರಸ್ತಾಪಿಸುವುದಾಗಿ ಹೇಳಿದ್ದರು.
↧