ಇಸ್ಲಾಮಾಬಾದ್: ಚೀನಾದ ಕೇಂದ್ರ ಮಿಲಿಟರಿ ಆಯೋಗದ ಉಪಾಧ್ಯಕ್ಷ ಜನರಲ್ ಕ್ಸು ಕಿಲಿಯಾಂಗ್ ನೇತೃತ್ವದ ಉನ್ನತ ಅಧಿಕಾರಿಗಳ ನಿಯೋಗವೊಂದು ಬುಧವಾರ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ನಲ್ಲಿ ಭೇಟಿಯಾಗಿ ಹಲವು ವಿಚಾರಗಳನ್ನು ಚರ್ಚಿಸಿದೆ. ಈ ನಿಯೋಗದ ಬಳಿ ಮಾತುಕತೆ ನಡೆಸಿದ ಇಮ್ರಾನ್ ಖಾನ್, ಕಾಶ್ಮೀರಕ್ಕೆ ಸಂಬಂಧಪಟ್ಟ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಭಾರತ ಆಕ್ರಮಿತ ಕಾಶ್ಮೀರದ ಜನರ ಹಕ್ಕುಗಳನ್ನು ಕ್ರೂರವಾಗಿ ಹತ್ತಿಕ್ಕಲಾಗುತ್ತಿದೆ. ಇದರಿಂದಾಗಿ ಉಗ್ರವಾದದ ಅಲೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಕಾಶ್ಮೀರದ ವಿಚಾರ ಈಗ […]
↧