ವಾಷಿಂಗ್ಟನ್: ತಾಲಿಬಾನ್ ನೊಂದಿಗೆ ಶಾಂತಿ ಒಪ್ಪಂದವನ್ನು ರದ್ದಪಡಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿದ್ದಾರೆ. ಭಾನುವಾರ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಮತ್ತು ಹಿರಿಯ ತಾಲಿಬಾನ್ ನಾಯಕರನ್ನು ಭೇಟಿಯಾಗಲು ಸಿದ್ಧತೆ ನಡೆಸಿದ್ದೇನೆ ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ. ಆದರೆ ಕಾಬೂಲ್ ನಲ್ಲಿ ಇತ್ತೀಚೆಗೆ ನಡೆದ ದಾಳಿಯಲ್ಲಿ ಅಮೆರಿಕ ಯೋಧನೊಬ್ಬ ಸಾವನ್ನಪ್ಪಿದ್ದು, ಈ ದಾಳಿಯ ಹೊಣೆಯನ್ನು ತಾಲಿಬಾನ್ ವಹಿಸಿಕೊಂಡ ಬಳಿಕ ಸೇನೆಯನ್ನು ಹಿಂಪಡೆಯುವ ಒಪ್ಪಂದ (ಕ್ಯಾಂಪ್ ಡೇವಿಡ್) ವನ್ನು ಅಮೆರಿಕ ರದ್ದುಪಡಿಸಿದೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ. […]
↧