ವಾಷಿಂಗ್ಟನ್: ಚಂದ್ರನ ದಕ್ಷಿಣ ಧ್ರುವದಲ್ಲಿ ಅಧ್ಯಯನ ನಡೆಸುವ ಉದ್ದೇಶದಿಂದ ಇಸ್ರೋ ಕಳುಹಿಸಿದ್ದ ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಹಾರ್ಡ್ ಲ್ಯಾಂಡಿಂಗ್ ಆದ ಸ್ಥಳದ ಚಿತ್ರವನ್ನು ಅಮೆರಿಕದ ಬಾಹ್ಯಾಕಾಶ ಏಜೆನ್ಸಿ ನಾಸಾ ಇಂದು (ಸೆ.26) ಬಿಡುಗಡೆ ಮಾಡಿದೆ. ಆದರೆ ಸಂಪರ್ಕ ಕಡಿತಗೊಂಡಿದ್ದ ವಿಕ್ರಮ್ ಲ್ಯಾಂಡರ್ ನಿಖರವಾಗಿ ಯಾವ ಪ್ರದೇಶದಲ್ಲಿ ಬಿದ್ದಿದೆ ಎಂಬುದನ್ನು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ ಎಂದು ತಿಳಿಸಿದೆ. ವಿಕ್ರಮ್ ಲ್ಯಾಂಡರ್ ದಕ್ಷಿಣ ಧ್ರುವ ಭಾಗದಲ್ಲಿ ಹಾರ್ಡ್ ಲ್ಯಾಂಡಿಂಗ್ ಆಗಿದೆ ಎಂಬುದು ನಾಸಾ ಕಳುಹಿಸಿರುವ ಹೊಸ ಚಿತ್ರದಿಂದ […]
↧