ರಿಯಾದ್: ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಈ ದುರಂತದಲ್ಲಿ ಕನಿಷ್ಠ 36 ಮಂದಿ ವಿದೇಶಿಗರು ಸಾವನ್ನಪ್ಪಿಅನೇಕರು ಗಾಯಗೊಂಡಿದ್ದಾರೆ. ಪಶ್ಚಿಮ ಸೌದಿ ಅರೇಬಿಯಾದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 36 ಜನರು ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿದ್ದಾರೆ. ಮುಸ್ಲಿಮರ ಪವಿತ್ರ ನಗರ ಮೆಕ್ಕಾ-ಮದೀನಾದಲ್ಲಿ ಈ ದುರಂತ ಸಂಭವಿಸಿದ್ದು, ಖಾಸಗಿ ಬಸ್ ಅಪಘಾತಕ್ಕೀಡಾಗಿದೆ. ಬಸ್‍ನಲ್ಲಿ ಅರಬ್ ಸೇರಿದಂತೆ ಏಷ್ಯಾದ ಹಲವು ಯಾತ್ರಾರ್ಥಿಗಳು ಇದ್ದರು. ಹೈಟೆಕ್ ಬಸ್ ಭಾರೀ ವಾಹನಕ್ಕೆ (ಎಲಿವೆಟರ್‍ಲೋಡರ್) ಅಪ್ಪಳಿಸಿ ಈ ದುರ್ಘಟನೆ ಸಂಭವಿಸಿತು. […]
↧