ವಾಷಿಂಗ್ಟನ್ (ಜ.8): ಇರಾನ್ ಮೇಜರ್ ಜನರಲ್ ಖಾಸಿಂ ಸೊಲೆಮನಿಯ ಅಮೆರಿಕ ಹತ್ಯೆ ಮಾಡಿದ ನಂತರ ಎರಡೂ ದೇಶಗಳ ಸಂಬಂಧ ಮತ್ತಷ್ಟು ಹಳಸಿದೆ. ಮೂರನೇ ಮಹಾಯುದ್ಧ ನಡೆಯಲಿದೆ ಎನ್ನುವ ಮಾತುಗಳೂ ಕೇಳಿ ಬರುತ್ತಿರುವಾಗಲೇ ಇರಾಕ್ನಲ್ಲಿನ ಅಮೆರಿಕ ವಾಯುನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ಮೂಲಕ ಅಮೆರಿಕದ ಸಿಟ್ಟನ್ನು ಮತ್ತಷ್ಟು ಹೆಚ್ಚಿಸಿದೆ. “ಜನವರಿ 7ರಂದು ಸಂಜೆ 5.30ರ ಸುಮಾರಿಗೆ (ಸ್ಥಳೀಯ ಕಾಲಮಾನ) ಇರಾನ್ 12ಕ್ಕೂ ಹೆಚ್ಚು ಮಿಸೈಲ್ಗಳನ್ನು ಹಾರಿಸಿದೆ. ಇರಾಕ್ನಲ್ಲಿರುವ ಅಮೆರಿಕ ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಈ […]
↧