ಟೋಕಿಯೊ: ಟೋಕಿಯೊ ಬಳಿ ಸಮುದ್ರದಲ್ಲೇ ನಿಲ್ಲಿಸಲಾಗಿರುವ ಕ್ರೂಸ್ ಹಡಗಿನಲ್ಲಿ(ಪ್ರವಾಸಿ ಹಡಗು) ಇನ್ನೂ 70 ಜನರಿಗೆ ಕರೋನವೈರಸ್ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಮಾರಕ ಸೋಂಕಿಗೆ ಒಳಗಾದವರ ಸಂಖ್ಯೆ 355 ಕ್ಕೆ ಏರಿದೆ ಎಂದು ಜಪಾನ್ ಆರೋಗ್ಯ ಸಚಿವ ಕಟ್ಸುನೊಬು ಕ್ಯಾಟೊ ಭಾನುವಾರ ತಿಳಿಸಿದ್ದಾರೆ. 70 ಜನರ ಪೈಕಿ 38 ಜನರಲ್ಲಿ ಜ್ವರ ಮತ್ತು ಕೆಮ್ಮಿನಂತಹ ಕೊರೊನಾವೈರಸ್ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಆದರೂ ರಕ್ತ ಪರೀಕ್ಷೆಯಲ್ಲಿ ಸೋಂಕಿಗೆ ತುತ್ತಾಗಿದ್ದಾರೆ ಎಂದು ಆರೋಗ್ಯ, ಕಾರ್ಮಿಕ ಮತ್ತು ಕಲ್ಯಾಣ ಸಚಿವಾಲಯ ತಿಳಿಸಿದೆ. 3,700 […]
↧