ಇಸ್ಲಾಮಾಬಾದ್, ಆ.27: ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಪಾಕಿಸ್ತಾನದ ಮಾಜಿ ಪ್ರಧಾನಿ ಯೂಸುಫ್ ರಝಾ ಗೀಲಾನಿಯವರನ್ನು ಬಂಧಿಸುವಂತೆ ಪಾಕಿಸ್ತಾನದ ನ್ಯಾಯಾಲಯವೊಂದು ಗುರುವಾರ ಆದೇಶ ಹೊರಡಿಸಿದೆ. ಪಾಕ್‌ನ ನ್ಯಾಶನಲ್ ಇನ್ಸೂರೆನ್ಸ್ ಲಿಮಿಟೆಡ್ ಕಂಪೆನಿ(ಎನ್‌ಐಸಿಎಲ್) ಹಗರಣದಲ್ಲಿ ಭಾಗಿಯಾಗಿದ್ದರೆನ್ನಲಾಗಿರುವ ಗೀಲಾನಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ವ್ಯಾಪಾರ ಅಭಿವೃದ್ಧಿ ಪ್ರಾಧಿಕಾರ(ಟಿಡಿಎ)ದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಫೆಡರಲ್ ತನಿಖಾ ಸಂಸ್ಥೆ(ಎಫ್‌ಐಎ) ಚಾರ್ಜ್‌ಶೀಟ್ ಸಲ್ಲಿಸಿದ ಬಳಿಕ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯವು ಯೂಸುಫ್ ರಝಾ ಗೀಲಾನಿ ಹಾಗೂ ಪಾಕಿಸ್ತಾನ […]
↧